ಗ್ರಾಮಾಂತರ ಸುದ್ದಿ

ಪ್ರಸನ್ನ ಪ.ಪೂ.ಕಾಲೇಜು ಶಿಕ್ಷಕ-ರಕ್ಷಕ ಸಭೆ

 

ಬೆಳ್ತಂಗಡಿ : ಪ್ರಸನ್ನ ಪದವಿ ಪೂರ್ವ ಕಾಲೇಜು ಹಾಗೂ 14 ಕಾಲೇಜುಗಳನ್ನು ಹೊಂದಿರುವ ಎ.ಎ ಅಕಾಡೆಮಿಯ ಸಹಯೋಗದೊಂದಿಗೆ ಶಿಕ್ಷಕ-ರಕ್ಷಕ ಸಭೆ ಹಾಗೂ ವಿದ್ಯಾರ್ಥಿಗಳ ಫ್ರೆಶರ್ ಡೇ ಕಾರ್ಯಕ್ರಮ ಆ.28ರಂದು ನಡೆಯಿತು.
ಪ್ರಸನ್ನ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಗಂಗಾಧರ ಗೌಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿ ಆಧುನಿಕ ಸ್ಪರ್ಧಾತ್ಮಕ ಶಿಕ್ಷಣದ ಕುರಿತು ಹಾಗೂ ಶಿಕ್ಷಕ-ರಕ್ಷಕ ಸಭೆಯ ಮಹತ್ವದ ಕುರಿತು ಪೋಷಕರಿಗೆ ಮಾಹಿತಿ ನೀಡಿದರು. ಆಡಳಿತಾಧಿಕಾರಿ ಶ್ರೀಮತಿ ಕೃಪಾ ಇವರು ಶಿಕ್ಷಣ ಸಂಸ್ಥೆಯಲ್ಲಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್, ಸಿಇಟಿ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಎ.ಎ ಅಕಾಡೆಮಿಯ ನಿರ್ದೇಶಕ ಅಣ್ಣೇಶ್, ವಾಣಿಜ್ಯ ವಿಭಾಗದ ಮುಖ್ಯಸ್ಥ ಶ್ರೀಮತಿ ಸುಮಲತಾ ಉಪಸ್ಥಿತರಿದ್ದರು. ವಿದ್ಯಾರ್ಥಿ ಹಾಗೂ ಪೋಷಕರಿಗೆ ಕ್ರೀಡೆಗಳನ್ನು ಏರ್ಪಡಿಸಲಾಗಿತ್ತು. ಸಭೆಯ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿನಿಯರಾದ ರಹಿಯಾನ ಸ್ವಾಗತಿಸಿದರು. ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿ, ಅಂಕಿತಾ ಧನ್ಯವಾದವಿತ್ತರು.

 

ನಿಮ್ಮದೊಂದು ಉತ್ತರ