ಬೆಳ್ತಂಗಡಿ: ಕೋವಿಡ್ -19 ಎರಡನೇ ಅಲೆಯ ನಿಯಂತ್ರಣಕ್ಕಾಗಿ ಲಾಕ್ಡೌನ್ ಮುಂದುವರೆಸಿದ ಹಿನ್ನಲೆಯಲ್ಲಿ ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ರಾಜ್ಯದ ಇತರ ಭಾಗದಲ್ಲಿರುವ ಎಂಡೋಸಲ್ಫಾನ್ ಪೀಡಿತರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುತುವರ್ಜಿ ವಹಿಸಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ರಾಜ್ಯದ ಮುಖ್ಯಮಂತ್ರಿ ಯಡ್ಡಿಯೂರಪ್ಪರಿಗೆ ಶಾಸಕ ಹರೀಶ್ ಪೂಂಜ ಅವರು ಮನವಿ ಸಲ್ಲಿಸಿದರು.ಜೊತೆಗೆ ಕೊರೋನ ಸಂಕಷ್ಟದ ಈ ಸಂದರ್ಭದಲ್ಲಿ ಕೊರೋನ ವಾರಿಯರ್ ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಲಾಕ್ಡೌನ್ ಪರಿಣಾಮವಾಗಿ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಫೋಟೋಗ್ರಾಫರ್ ಗಳಿಗೆ ವಿಶೇಷ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಮುಖ್ಯಮಂತ್ರಿಗಳಲ್ಲಿ ವಿನಂತಿಸಿದರು.