ಬೆಳ್ತಂಗಡಿ: ಮೂರನೇ ಹಂತದ ಅನ್ ಲಾಕ್ ಕುರಿತಾದಂತೆ ಇಂದು ಸಿಎಂ ಯಡಿಯೂರಪ್ಪ ಪತ್ರಿಕಾಗೋಷ್ಠಿಯ ಮೂಲಕ ಮಾಹಿತಿ ನೀಡಿದ್ದಾರೆ . ರಾಜ್ಯಾದ್ಯಂತ ಹೇರಿದ್ದ ವೀಕೆಂಡ್ ಕರ್ಪ್ಯೂ ವನ್ನು ರದ್ದುಪಡಿಸಲಾಗಿದ್ದು, ಬೆಳಗ್ಗೆ 5 ರಿಂದ ರಾತ್ರಿ 9 ರವರೆಗೆ ಅಂಗಡಿಗಳು ತೆರೆಯಲು ಅವಕಾಶ ನೀಡಲಾಗಿದೆ .
ಸೋಮವಾರದಂದು ರಂದು ಬೆಳಿಗ್ಗೆ 5 ಗಂಟೆಯಿಂದ ಜು.19 ಬೆಳಿಗ್ಗೆ 5.00 ಗಂಟೆಯ
ವರೆಗೆ ಜಾರಿಗೆ ಬರುವಂತೆ ಅನ್ಲಾಕ್ ಹೊಸ ಸಡಿಲಿಕೆ ಕ್ರಮಗಳನ್ನು ಸಿ.ಎಂ ಪ್ರಕಟಿಸಿದ್ದಾರೆ.
ಸರ್ಕಾರಿ / ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ . 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ .ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ . ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ . 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ .ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ .
ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ . ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ . ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ .
ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋ
ಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ . ಕೋವಿಡ್ -19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ಸೂಚನೆ ನೀಡಲಾಗಿದೆ. ಆದರೆ
ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ. ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿರುವುದಿಲ್ಲ ಎಂದು ಸಿ.ಎಂ ತಿಳಿಸಿದ್ದಾರೆ.