ಧರ್ಮಸ್ಥಳ: ಕಲರ್ ಕನ್ನಡ ಚಾನಲ್‌ನಲ್ಲಿ ಪ್ರಸಾರವಾಗುತ್ತಿದ್ದ ಬಿಗ್‌ಬಾಸ್ ಸೀಸನ್-8 ರಿಯಾಲಿಟಿ ಶೋ ವಿಜೇತರಾದ ಮಂಜು ಪಾವಗಡ ರವರು ಆ.24 ರಂದು ಶ್ರೀ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.
ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಂಜು ಪಾವಗಡ ರವರ ತಂದೆ, ತಾಯಿ, ಕುಟುಂಬವರ್ಗದವರು ಉಪಸ್ಥಿತರಿದ್ದರು.