ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 17) ಹೊಸದಾಗಿ 326 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.
ಈ ಮೂಲಕ, ರಾಜ್ಯದಲ್ಲಿ ಕೊರೊನಾ
ಸೋಂಕಿತರ ಸಂಖ್ಯೆ 29,83,459 ಕ್ಕೆ
ಏರಿಕೆಯಾಗಿದೆ. ಸೋಂಕಿತರ ಪೈಕಿ
29,36,039 ಜನ ಗುಣಮುಖರಾಗಿ
ಡಿಸ್ಟಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ
ಇಂದು ಕೊರೊನಾ ಸೋಂಕಿನಿಂದ 4 ಜನರ
ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ
ಈವರೆಗೆ ಕೊರೊನಾದಿಂದ 37,941 ಜನ
ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,450
ಜನರಲ್ಲಿ ಕೊರೊನಾ ಸೋಂಕು
ಸಕ್ರಿಯವಾಗಿದೆ. ಆರೋಗ್ಯ ಮತ್ತು
ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ
ಮಾಹಿತಿ ನೀಡಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ:
ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 173, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 3, ಚಿತ್ರದುರ್ಗ 1, ದಕ್ಷಿಣ ಕನ್ನಡ 22, ದಾವಣಗೆರೆ ( ಧಾರವಾಡ 4, ಗದಗ 0, ಹಾಸನ 12, ಹಾವೇರಿ 0, ಕಲಬುರಗಿ 1, ಕೊಡಗು 8, ಕೋಲಾರ 5, ಕೊಪ್ಪಳ 0, ಮಂಡ್ಯ 4, ಮೈಸೂರು 42, ರಾಯಚೂರು 1, ರಾಮನಗರ 0, ಶಿವಮೊಗ್ಗ 5, ತುಮಕೂರು 17, ಉಡುಪಿ 12, ಉತ್ತರ ಕನ್ನಡ 4, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.