ಬೆಳ್ತಂಗಡಿ : ಕುತ್ಲೂರುನ ಯುವತಿ ಸೇರಿದಂತೆ ಇಬ್ಬರು ನಕ್ಸಲ್‌ವಾದಿಗಳ ವಿರುದ್ಧ ವಿಶೇಷ ನ್ಯಾಯಾಲಯವು ಬಂಧನ ವಾರೆಂಟ್ ಜಾರಿಗೊಳಿಸಿ ಅದೇಶ ಹೊರಡಿಸಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆಯ ಪ್ರಕರಣಗಳ ವಿಚಾರಣೆಯಕುರಿತು ವಿಶೇಷ ನ್ಯಾಯಾಲಯವು ಬಂಧನ ವಾರೆಂಟ್ ಜಾರಿಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿ
ನ ಕುತ್ಲೂರು ಗ್ರಾಮದ ಕೊಟ್ಯಂತಡ್ಕ ಮನೆಯ
ಸುಂದರಿ ಆಲಿಯಾಸ್ ಗೀತಾ ಆಲಿಯಾಸ್ ಸಿಂಧು ಮತ್ತು ರಾಯಚೂರು ಜಿಲ್ಲೆಯ ಅರೋಲಿ ಗ್ರಾಮ ಕುಡುಡಿ ಮುಖ್ಯ ರಸ್ತೆಯ ಹನುವ್ವನ ದೂತರ ಮಠದ ಎದುರಿನ ಅಂಬೇಡ್ಕರ್
ಕಾಲನಿಯ ಮಹೇಶ್ ಆಲಿಯಾಸ್ ಜಯಣ್ಣ ಆಲಿಯಾಸ್ ಜಾನ್ ಆಲಿಯಾಸ್ ಮಾರಪ್ಪ ತಲೆ ಮರೆಸಿಕೊಂಡಿರುವ ಆರೋಪಿತರು.
ಪಶ್ಚಿಮಘಟ್ಟದಲ್ಲಿ ನಡೆಯುತ್ತಿರುವ ನಕ್ಸಲ್ ಚಳುವಳಿಯಲ್ಲಿ ಇವರುಸಕ್ರಿಯಾರಾಗಿದ್ದರು ಎಂದು ತಿಳಿದುಬಂದಿದೆ. ಈ ಹಿಂದೆ ಕೂಡ ಕರ್ನಾಟಕ ಪೊಲೀಸರು ಇವರ ಪತ್ತೆಗಾಗಿ
ಬಹುಮಾನ ಘೋಷಿಸಿತ್ತು. ಇದೀಗ ರಾಷ್ಟ್ರೀಯ ತನಿಖಾ ಸಂಸ್ಥೆಯು ಆರೋಪಿತರ ಪತ್ತೆಗಾಗಿ ಸಾರ್ವಜನಿಕ ತಿಳುವಳಿಕೆಯ ಕರಪತ್ರವನ್ನು ಹೊರತಂದಿದೆ. ಅಲ್ಲದೆ ಇಬ್ಬರ ಸುಳಿವು
ನೀಡಿದವರಿಗೆ ತಲಾ ರೂ. 10 ಲಕ್ಷ ಬಹುಮಾನ
ಘೋಷಿಸಿದೆ.
ನ್ಯಾಶನಲ್ ಇನ್ವೇಷ್ಟಿಗೆಶನ್ ಏಜೆನ್ಸಿ ಹೌಸ್ ನಂಬ್ರ 28/443 ಗಿರಿನಗರ ಕಡವಂತರ ಕೊಚ್ಚಿ ಕೇರಳ- 682020, ಮೊಬೈಲ್ 9477715294 ಸಂಖ್ಯೆಗೆ ಸಂಪರ್ಕಿಸಬೇಕೆಂದು ಕೋರಲಾಗಿದೆ. ಸುಳಿವು ನೀಡಿದವರಮಾಹಿತಿಗೌಪ್ಯವಾಗಿರಿಸಲಾಗುವುದೆಂದು ತಿಳಿಸಲಾಗಿದೆ.