ರಾಜ್ಯ ವಾರ್ತೆ

ಮೇ 16ರಿಂದ ಶಾಲೆಗಳು ಆರಂಭ ವಾಗುತ್ತಾ….? ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಏನು ಹೇಳಿದ್ದಾರೆ.

ಬೆಳ್ತಂಗಡಿ: ಕೋವಿಡ್ ನಿಂದಾಗಿ ಕಳೆದ ಎರಡು ವರ್ಷಗಳಲ್ಲಿ ಶಾಲಾ ವಿದ್ಯಾರ್ಥಿಗಳು ಎದುರಿಸುತ್ತಿರುವ ಕಲಿಕಾ ಕೊರತೆ ಸರಿದೂಗಿಸಲು ಶಿಕ್ಷಣ ಇಲಾಖೆ ಈ ಬಾರಿ 15 ದಿನ ಮೊದಲೇ ಶಾಲೆ ಆರಂಭಿಸಿ “ಕಲಿಕಾ ಚೇತರಿಕೆ” ಕಾರ್ಯಕ್ರಮ ನಡೆಸಲು ಸಜ್ಜಾಗಿದೆ.

ಈ ನಡುವೆ ಕೆಲ ವಿಧಾನ ಪರಿಷತ್ ಸದಸ್ಯರು ಬೇಸಿಗೆ ತಾಪಮಾನದ ನೆಪದಲ್ಲಿ ಬೇಸಿಗೆ ರಜೆಯನ್ನು ಒಂದು ತಿಂಗಳ ಕಾಲ ವಿಸ್ತರಿಸುವಂತೆ ಮುಖ್ಯಮಂತ್ರಿ ಯವರನ್ನು ಕೋರಿರುವುದು ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರ ವಲಯದಲ್ಲಿ ಗೊಂದಲ ಹುಟ್ಟುಹಾಕಿದೆ.

ಇದಕ್ಕೆ ಸಂಬಂಧಪಟ್ಟಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.

ಮೇ.16 ರಿಂದಲೇ ಶಾಲೆಗಳು ಪ್ರಾರಂಭ:

ಶಾಲೆ ರಜೆ ವಿಸ್ತರಣೆ ಮಾಡಬೇಕು ಎಂಬ ಬಗ್ಗೆ ಕೆಲ ಶಾಸಕರು ಆಗ್ರಹ ಮಾಡಿದ್ದಾರೆ ಎಂಬ ಮಾಹಿತಿ ಬಂದಿದೆ. ಆದರೆ ಕೊರೋನ ಹಿನ್ನೆಲೆಯಲ್ಲಿ “ಕಲಿಕಾ ಚೇತರಿಕೆ” ಕಾರ್ಯಕ್ರಮ ರೂಪಿಸಿ 15 ದಿನ ಮೊದಲೇ ಶಾಲೆ ಆರಂಭಿಸಲು ನಿರ್ಧರಿಸಲಾಗಿತ್ತು. ಅದರಲ್ಲಿ ಯಾವುದೇ ಬದಲಾವಣೆಯಿಲ್ಲ. ಪೂರ್ವ ನಿರ್ಧಾರದಂತೆ ಶಾಲೆಗಳು ಆರಂಭವಾಗಲಿವೆ ಎಂದು ಬಿ.ಸಿ ನಾಗೇಶ್ ರವರು ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ