ನವದೆಹಲಿ:ಬೆಲೆ ಏರಿಕೆಯಿಂದ ಕಂಗೆಟ್ಟ ಜನರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ಕೊಟ್ಟಿದೆ. ಪೆಟ್ರೋಲ್, ಡೀಸೆಲ್, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್ ದರದಲ್ಲಿ ಇಳಿಕೆಯಾಗಿದೆ. ಈ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವಿಟ್ ಮೂಲಕ ಮಾಹಿತಿ ನೀಡಿದ್ದಾರೆ.
ಪೆಟ್ರೋಲ್ ಮೇಲೆ ಪ್ರತಿ ಲೀಟರ್‌ಗೆ 9 ರೂಪಾಯಿ 50 ಪೈಸೆ ಹಾಗೂ ಡಿಸೇಲ್ ಮೇಲೆ 7 ರೂಪಾಯಿ ಇಳಿಕೆ ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ಗ್ರಾಹಕರಿಗೆ ರಿಲೀಫ್ ನೀಡಿದ್ದಾರೆ.