ಬೆಂಗಳೂರು: ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಪುತ್ತೂರು ಮೂಲದ ರಾಜೇಶ್ ನೇಮಕಗೊಂಡಿದ್ದಾರೆ.
ಇಂದು ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಆರ್ ಎಸ್ ಎಸ್ ತುಮಕೂರು ವಿಭಾಗದ ಪ್ರಚಾರಕರಾಗಿದ್ದ ರಾಜೇಶ್ ಅವರನ್ನು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಕಳೆ ದ ಆರು ವರ್ಷಗಳಿಂದ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಅರುಣ್ ಕುಮಾರ್ ಅವರನ್ನು ಆರ್ ಎಸ್ ಎಸ್ ಉತ್ತರ ಮತ್ತು ದಕ್ಷಿಣ ಕರ್ನಾಟಕ ಪ್ರಾಂತ್ಯದ ಪ್ರಚಾರಕರಾಗಿ ಸೇವೆ ಸಲ್ಲಿಸಿದ್ದಾರೆ.