ಬೆಳ್ತಂಗಡಿ :ರಾಜ್ಯ ಸಭೆಯ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿ ಜು.21 ರಂದು ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲು ನವ ದೆಹಲಿಗೆ ತೆರಳಿದ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯ ವಿಮಾನ ನಿಲ್ದಾಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸ್ವಾಗತಿಸಿದರು . ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಕೋಟ್ಯಾನ್,ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಗೌಡ ನಾವೂರು, ಶ್ರೀನಿವಾಸ ರಾವ್ ಧರ್ಮಸ್ಥಳ ಜೊತೆಗೆ ಇದ್ದರು