ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ಮುಕ್ತ ಅಧಿಕಾರ ನೀಡಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಆದಷ್ಟು ಬೇಗನೆ ಕೊಲೆಗಡುಕರ ಪತ್ತೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನ ಆರ್.ಟಿ.ನಗರದ ಖಾಸಗಿ ನಿವಾಸದ ಬಳಿ ಮಾತನಾಡಿದ ಸಿಎಂ, ಎನ್‌ಐಎ ಗೆ ಪ್ರಕರಣ ಹಸ್ತಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ತಾಂತ್ರಿಕ ಹಾಗೂ ಕಾಗದ ಪತ್ರಗಳ ಕೆಲಸ ಜಾರಿಯಲ್ಲಿದೆ. ಆದಷ್ಟು ಬೇಗನೆ ಪ್ರಕರಣವನ್ನು ಎನ್‌ಐಎ ಗೆ ಹಸ್ತಾಂತರ ಮಾಡಲಾಗುವುದು ಎಂದು ಹೇಳಿದ್ದಾರೆ.
ಅಲ್ಲದೇ, ಅನೌಪಚಾರಿಕವಾಗಿ ಎನ್‌ಐಎ ಗೆ ಈಗಾಗಲೇ
ತಿಳಿಸಲಾಗಿದೆ. ಕೇರಳ ಮತ್ತು ಮಂಗಳೂರಿನಲ್ಲಿ ಪ್ರಾಥಮಿಕ ಮಾಹಿತಿಯನ್ನು ಪಡೆಯುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಮಧ್ಯೆ ಮುಂದಿನ ದಿನಗಳಲ್ಲಿ ಹತ್ಯೆಗೀಡಾದ ಮಸೂದ್ ಹಾಗೂ ಫಾಜಿಲ್ ಮನೆಗೆ ಮುಂದಿನ ದಿನಗಳಲ್ಲಿ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.