ಬೆಂಗಳೂರು: ಕರ್ನಾಟಕ ಸರ್ಕಾರದ ಶಿಫಾರಸಿನ ಮೇಲೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಯನ್ನು ವಹಿಸಿಕೊಳ್ಳುವಂತೆ ಎನ್‌ಐಎಗೆ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ.
ಕಳೆದ ಕೆಲವು ದಿನಗಳ ಹಿಂದೆ ಪ್ರಕರಣವನ್ನು ಎನ್‌ಐಎ ತನಿಖೆಗೆ ಹಸ್ತಾಂತರಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು. ಅದರ ಬೆನ್ನಲ್ಲೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೂಡ ಎನ್ ಐಎ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗೆ ಪತ್ರ ಬರೆದಿದ್ದರು. ಇದೀಗ ರಾಷ್ಟ್ರೀಯ ತನಿಖಾ ದಳಕ್ಕೆ ಪ್ರಕರಣದ ತನಿಖೆಯನ್ನು ವಹಿಸಿ ಕೇಂದ್ರ ಗೃಹ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.
ಈಗಾಗಲೇ ಎನ್ ಐಎ ಅಧಿಕಾರಿಗಳು ಬೆಳ್ಳಾರೆಗೆ ಭೇಟಿ ನೀಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಿದ್ದಾರೆ.