ರಾಜ್ಯ ವಾರ್ತೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ಪಾಸಿಟಿವ್: ಎರಡು ದಿನಗಳ ದೆಹಲಿ ಪ್ರವಾಸ ರದ್ದು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿ ಕೋವಿಡ್ ಸೋಂಕು ತಗುಲಿದೆ.ಇಂದು ಕೋವಿಡ್ ಪಾಸಿಟಿವ್ ಆಗಿರುವ ಬಗ್ಗೆ ಸಿಎಂ ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ತಮ್ಮ ಸಂಪರ್ಕಕ್ಕೆ ಬಂದಿರುವವರು ಪರೀಕ್ಷೆಗೆ ಒಳಪಡುವಂತೆ ಸಲಹೆ ಮಾಡಿದ್ದಾರೆ.

ಕೋವಿಡ್ ಸೋಂಕು ತಗುಲಿರುವ ಕಾರಣ ಮನೆಯಲ್ಲಿಯೇ ಸಿಎಂ ಕ್ವಾರಂಟೈನ್ ನಲ್ಲಿದ್ದು, ಎರಡು ದಿನಗಳ ದೆಹಲಿ ಪ್ರವಾಸ ರದ್ದುಗೊಂಡಿದೆ.
ಇಂದು ರಾಷ್ಟ್ರಪತಿ ಭವನದಲ್ಲಿ ಅಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮ ಮತ್ತು ನಾಳೆ ನೀತಿ ಆಯೋಗದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಬೇಕಿತ್ತು.

ನಿಮ್ಮದೊಂದು ಉತ್ತರ