ರಾಜ್ಯ ವಾರ್ತೆ

ರಾಜ್ಯಾದ್ಯಂತ ಇನ್ನು ಮುಂದೆ ಮಾಸ್ಕ್ ಕಡ್ಡಾಯ – ಸಚಿವ ಸುಧಾಕರ್

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಕಾರಣ, ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.

ಇಂದು ಕೋವಿಡ್ ನಿಯಂತ್ರಣ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕ‌ ಮಾತನಾಡಿ, “ರಾಜ್ಯದಲ್ಲಿ ಇನ್ಮುಂದೆ ಮಾಸ್ಕ್ ಎಲ್ಲರೂ ಧರಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು. ಕೊರೋನಾ ಹೆಚ್ಚಳ ಕಾರಣದಿಂದಾಗಿ 60 ವರ್ಷ ಮೇಲ್ಪಟ್ಟವರು ತಪ್ಪದೇ ಶೀಘ್ರವೇ 3ನೇ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆಯಬೇಕು ಎಂದು ಹೇಳಿದರು.

ನಿಮ್ಮದೊಂದು ಉತ್ತರ