ರಾಜ್ಯದ ವಿವಿಧ ಕಡೆಗಳಲ್ಲಿ ಕಳೆದೊಂದು ವಾರದಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಇನ್ನೂ ಇದರ ಅಬ್ಬರ ಕಡಿಮೆಯಾಗಿಲ್ಲ. ದಕ್ಷಿಣ ಕನ್ನಡ, ಉಡುಪಿ, ಕೊಡಗು ಸಹಿತ ಕರಾವಳಿ ಭಾಗದಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆಯ ಮುನ್ಸೂಚನೆ ಪ್ರಕಟಿಸಿದೆ.
ಕರ್ನಾಟಕದಲ್ಲಿ ಇನ್ನೂ ಮಳೆಯ ಅಬ್ಬರ ಕಡಿಮೆಯಾಗಿಲ್ಲ. ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಕರಾವಳಿ ಕರ್ನಾಟಕ, ಮಲೆನಾಡು, ಉತ್ತರ ಕರ್ನಾಟಕದ ಸಹಿತ ಕರ್ನಾಟಕದ 10 ಜಿಲ್ಲೆಗಳ ಹಲವು ಭಾಗಗಳಲ್ಲಿ ಸೆ. 11ರವರೆಗೆ ಭಾರೀ ಮಳೆಯಾಗುವ ಸಾದತೆಯಿದೆ.
ಕರಾವಳಿಯ 3 ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ , ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ‘ಆರೆಂಜ್ ಅಲರ್ಟ್ ಘೋಷಿಸಲಾಗಿದೆ.