ನವದೆಹಲಿ : ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.
ಇಂದು ಮತಎಣಿಕೆ ನಡೆದಿದ್ದು, ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು 7,897 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿಯಾದ ಶಶಿ ತರೂರ್ ಅವರಿಗೆ ಕೇವಲ 1072 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.