ಬೆಳ್ತಂಗಡಿ: ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದ್ದು, ಒಟ್ಟು 8 ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 13 ಮತ್ತು 14ರಂದು ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ನವೆಂಬರ್ 14ರಂದು ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.