ಜಿಲ್ಲಾ ವಾರ್ತೆತಾಲೂಕು ಸುದ್ದಿರಾಜ್ಯ ವಾರ್ತೆ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಂಗಳೂರಿನಲ್ಲಿ ನಡೆಯಲಿರುವ “ಪ್ರಜಾಧ್ವನಿ ಯಾತ್ರೆ”ಯ ಪೂರ್ವ ಸಮಾಲೋಚನ ಸಭೆ

ಬೆಳ್ತಂಗಡಿ : ಜ.22 ರಂದು ಮಂಗಳೂರು ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ “ಪ್ರಜಾಧ್ವನಿ ಯಾತ್ರೆ”ಯ ಪೂರ್ವ ಸಮಾಲೋಚನ ಸಭೆಯು ಇಂದು ಬೆಳ್ತಂಗಡಿಯ ನಗರ ಮತ್ತು ಗ್ರಾಮೀಣ ಬ್ಲಾಕಿನ ಗುರುನಾರಾಯಣ ಸ್ವಾಮಿ ಸಭಾಂಗಣದಲ್ಲಿ ನಡೆಯಿತು.

ಈ ಸಭೆಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಪ್ರಜಾಧ್ವನಿ ಯಾತ್ರೆ ಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಕಾರ್ಯಕರ್ತಗೆ ಕರೆಯನ್ನು ನೀಡಿದರು. ‌‌ ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ವಸಂತ ಬಂಗೇರ, ಮಾಜಿ ಸಚಿವರಾದ ಗಂಗಾಧರ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯಾದ ರಕ್ಷಿತ್ ಶಿವರಾಮ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಬ್ಲಾಕ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್ ಮತ್ತು ರಂಜನ್ ಗೌಡ ಹಾಗೂ ಕಾಂಗ್ರೆಸ್ ನ ಪ್ರಮುಖ ಮುಖಂಡರುಗಳು ಕಾರ್ಯಕರ್ತರ ಸಭೆಯಲ್ಲಿ ಉಪಸ್ಥಿತರಿದ್ದರು.

ನಿಮ್ಮದೊಂದು ಉತ್ತರ