ತಾಲೂಕು ಸುದ್ದಿ

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

filter: 0; jpegRotation: 0; fileterIntensity: 0.000000; filterMask: 0; module:1facing:0; hw-remosaic: 0; touch: (-1.0, -1.0); modeInfo: ; sceneMode: 32768; cct_value: 0; AI_Scene: (-1, -1); aec_lux: 0.0; hist255: 0.0; hist252~255: 0.0; hist0~15: 0.0;

ಉಜಿರೆ: ಇಲ್ಲಿಯ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನವು ಶ್ರೀ ಕ್ಷೇತ್ರ ಧರ್ಮಸ್ಥಳದ ಸನ್ನಿಧಿ ಸಭಾಂಗಣದಲ್ಲಿ ಆ.22 ರಂದು ನಡೆಯಿತು.

ಕಾರ್ಯಕ್ರಮವನ್ನು ಡಾ| ಡಿ ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.

ಬೆಂಗಳೂರು ಕೆನರಾ ಬ್ಯಾಂಕ್, ಕಾರ್ಯನಿರ್ವಾಹಕ ನಿರ್ದೇಶಕ ಭವೇಂದ್ರ ಕುಮಾರ್ ತರಬೇತಿ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಬೆಂಗಳೂರು ಕೆನರಾ ಬ್ಯಾಂಕ್ ಮುಖ್ಯ ಜನರಲ್ ಮ್ಯಾನೇಜರ್ ಕೆ.ಜೆ. ಶ್ರೀಕಾಂತ್, ಮಂಗಳೂರು ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಸುಧಾಕರ ಕೋಟಾರಿ ಭಾಗವಹಿಸಿದ್ದರು.

ಹಿರಿಯ ಕಛೇರಿ ಸಹಾಯಕ ಪ್ರಸಾದ ಪ್ರಾರ್ಥಿಸಿದರು. ರುಡ್ ಸೆಟ್ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯ್ ಕುಮಾರ್ , ಸ್ವಾಗತಿಸಿ, ವರದಿ ವಾಚಿಸಿದರು. ಉಜಿರೆ ರುಡ್ ಸೆಟ್ ನಿರ್ದೇಶಕ ಅಜೇಯ ಧನ್ಯವಾದವಿತ್ತರು. ಉಜಿರೆ ರುಡ್ ಸೆಟ್ ಹಿರಿಯ ಅಧ್ಯಾಪಕಿ ಶ್ರೀಮತಿ ಅನಸೂಯ ಕಾರ್ಯಕ್ರಮ ನಿರೂಪಿಸಿದರು.

ನಿಮ್ಮದೊಂದು ಉತ್ತರ