ಶಿರ್ಲಾಲು : ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ಶಿರ್ಲಾಲುವಿನಲ್ಲಿ ಕಳೆದ ೩೭ ವರ್ಷಗಳಿಂದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾಗಿದ್ದ ಪಿ.ಹೆಚ್ ನಿತ್ಯಾನಂದ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭವು ಅಳದಂಗಡಿ ಶ್ರೀ ಗುರು ಸಭಾಭವನದಲ್ಲಿ ನಡೆಯಿತು.
ಬೆಳ್ತಂಗಡಿ ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಕಿಶೋರ್ ಹೆಗ್ಡೆ, ಅಭಿನಂದನಾ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ್ ಅಜಿಲ, ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್,
ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ ಬಿ. ನಾಯಕ್, ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಸೋಮನಾಥ ಬಂಗೇರ, ಪ್ರಗತಿಪರ ಕೃಷಿಕ ಎಂ. ಗಂಗಾಧರ ಮಿತ್ತಮಾರು, ತಾ. ಪಂ. ಸದಸ್ಯರಾದ ವಿನುಷಾ ಪ್ರಕಾಶ್ ಮತ್ತು ಸುಧೀರ್ ಆರ್ ಸುವರ್ಣ, ಸಹಕಾರ ಅಭಿವೃದ್ಧಿ ಅಧಿಕಾರಿ ಸುಕನ್ಯ ಸಂಘ ಅಧ್ಯಕ್ಷ ನವೀನ್ ಕೆ. ಸಾಮಾನಿ ಉಪಸ್ಥಿತರಿದ್ದರು.