ಬೆಳ್ತಂಗಡಿ: ಪ್ರತಿ ವರ್ಷದಂತೆ ಈ ವರ್ಷವೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗಳು ಹಾಗೂ ಸಂಘ ಸಂಸ್ಥೆಗಳಿಗೆ ಸರಕಾರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಿದ್ದು, ಸಂಘ-ಸಂಸ್ಥೆಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳದ ಧರ್ಮೋತ್ಥಾನ ಟ್ರಸ್ಟ್ ೨೦೨೦ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರತಿಷ್ಠಿತ ಪ್ರಶಸ್ತಿಗೆ ಪಾತ್ರವಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮೂರ್ತಿಯ ಪ್ರತಿಷ್ಠಾಪನಾ ಸಂದರ್ಭದಲ್ಲಿ ಜನಮಂಗಲ ಕಾರ್ಯಗಳಲ್ಲೊಂದಾದ ಪುರಾತನ ದೇವಾಲಯಗಳಿಗೆ ಕಾಯಕಲ್ಪ ನೀಡುವ ಯೋಜನೆಯನ್ನು ಸಂಕಲ್ಪಿಸಿ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ನ್ನು ಪ್ರಾರಂಭಿಸಿದರು.