ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಎರಡು ವರ್ಷಗಳ ಬಳಿಕ ಕೊನೆಗೂ ಕಾಲ ಕೂಡಿ ಬಂದಿದೆ. ನ.೭ರಂದು ಚುನಾವಣೆ ನಡೆಸಲು ಚುನಾವಣಾಧಿಕಾರಿಗಳು ದಿನ ನಿಗದಿಗೊಳಿಸಿದ್ದು, ಚುನಾಯಿತ ಎಲ್ಲಾ ಸದಸ್ಯರಿಗೆ ನೋಟೀಸು ಜಾರಿಗೊಳಿಸಲಾಗಿದೆ.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳು ಅಂದು ಬೆಳಗ್ಗೆ ೧೦ರಿಂದ ೧೧ ಗಂಟೆಯೊಳಗೆ ಪಟ್ಟಣ ಪಂಚಾಯತದಲ್ಲಿರುವ ಚುನಾವಣಾಧಿಕಾರಿಗಳಿ ನಾಮಪತ್ರ ಸಲ್ಲಿಸಬೇಕು. ಮಧ್ಯಾಹ್ನ ಗಂಟೆ ೧ರಿಂದ ೧.೧೫ರವರೆಗೆ ನಾಮಪತ್ರಗಳ ಪರಿಶೀಲನೆ, ಗಂಟೆ ೧.೧೫ರಿಂದ ೧.೨೫ರವರೆಗೆ ನಾಮಪತ್ರ ಹಿಂತೆಗೆದುಕೊಳ್ಳಲು ಅವಕಾಶವಿದೆ. ಅಗತ್ಯವಿದ್ದಲ್ಲಿ ಮಧ್ಯಾಹ್ನ ೧.೪೫ಕ್ಕೆ ಚುನಾವಣೆ ನಡೆದು ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಯನ್ನು ಚುನಾವಣಾಧಿಕಾರಿಗಳು ಘೋಷಣೆ ಮಾಡಲಿದ್ದಾರೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷತೆಗೆ ಒಂದೊಂದು ನಾಮಪತ್ರ ಸಲ್ಲಿಕೆಯಾದಲ್ಲಿ ಆವಿರೋಧ ಆಯ್ಕೆ ನಡೆಯಲಿದೆ.