ಗ್ರಾಮಾಂತರ ಸುದ್ದಿಜಿಲ್ಲಾ ವಾರ್ತೆತಾಲೂಕು ಸುದ್ದಿರಾಜ್ಯ ವಾರ್ತೆ

ಕಡಿರುದ್ಯಾವರದಲ್ಲಿ ತೋಟದಲ್ಲಿ ಉಳಿದ ಕಾಡಾನೆ ಮರಿ

ಕಡಿರುದ್ಯಾವರ: ಕಾಡಿನಿಂದ ತೋಟಕ್ಕೆ ನುಗ್ಗಿದ ಆನೆಗಳ ಹಿಂಡೊಂದರ ಆನೆಮರಿ ಹಿಂದೆ ಹೋಗಲಾಗದೆ ತೋಟದಲ್ಲಿ ಉಳಿದ ಘಟನೆ ಅ.29ರ ರಾತ್ರಿ ಕಡಿರುದ್ಯಾವರದಲ್ಲಿ ನಡೆದಿದೆ.
ಕಡಿರುದ್ಯಾವರ ಗ್ರಾಮದ ಡೀಕಯ್ಯ ಗೌಡರವರ
ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಕೃಷಿಯನ್ನು ತಿಂದು ಸಂಪೂರ್ಣ ನಾಶ ಮಾಡಿದೆ. ತೋಟದಿಂದ ಕಾಡಿಗೆ ಹೋಗುವ ಸಮಯದಲ್ಲಿ ಮರಿಯಾನೆಗೆ ಹೋಗಲು ಸಾಧ್ಯವಾಗದೆ ತೋಟದಲ್ಲೇ ಬಾಕಿಯಾಯಿತು ಎಂದು ತಿಳಿದು ಬಂದಿದೆ.
ಬೆಳಗ್ಗೆ ತೋಟದ ಮಾಲಕರು ಹೋದಾಗ ವಿಷಯ ಗೊತ್ತಾಗಿದ್ದು,ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಸುದ್ದಿ ತಿಳಿದು ಅದನ್ನು ನೋಡಲು ಜನರು ಬರುತ್ತಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ತ್ಯಾಗರಾಜ್ ಮತ್ತು ಸಿಬ್ಬಂದಿಗಳು ಧಾವಿಸಿದ್ದಾರೆ

ನಿಮ್ಮದೊಂದು ಉತ್ತರ