ಗ್ರಾಮಾಂತರ ಸುದ್ದಿಜಿಲ್ಲಾ ವಾರ್ತೆತಾಲೂಕು ಸುದ್ದಿ

ನಿಡಿಗಲ್ ಸೇತುವೆ ಲೋಕಾಪ೯ಣೆ

ಉಜಿರೆ: ಮಂಗಳೂರು-ಮಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಯ ನಿಡಿಗಲ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ಯಿಂದ ರೂ.15 ಕೋಟಿ ರೂ ವೆಚ್ಚದಲ್ಲಿ ನಿಮಿ೯ಸಲಾದ ನಿಡಿಗಲ್ ಸೇತುಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ನ.22ರಂದು ಉದ್ಘಾಟಿಸಿದರು.


ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಸೇತುವೆ ಕಾಮಾಗಾರಿ ಉತ್ತಮವಾಗಿ ನಡೆದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಜಿಪಸ ಕೊರಗಪ್ಪ ನಾಯ್ಕ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ ಕಲ್ಮಂಜ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯಾನಂದ ಗೌಡ, ಜನಪ್ರತಿನಿಧಿಗಳು, ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.

ನಿಮ್ಮದೊಂದು ಉತ್ತರ