ತಾಲೂಕು ಸುದ್ದಿ

ಪತ್ರಕತ೯ರ ಗ್ರಾಮ ವಾಸ್ತವ್ಯ ಉದ್ಘಾಟನೆ

ಬೆಳ್ತಂಗಡಿ : ಕುಟುಂಬದ ರೀತಿಯಲ್ಲಿ ಗ್ರಾಮಸ್ಥರನ್ನು ಸೇರಿಸಿ ಅಭಿವೃದ್ಧಿಗೆ ಪೂರಕವಾದ ಈ ಗ್ರಾಮ ವಾಸ್ತವ್ಯ ರಾಜ್ಯಕ್ಕೆ ಮಾದರಿಯಾಗಿದೆ. ಈ ಗ್ರಾಮ ವಾಸ್ತವ್ಯ ಎಲ್ಲಾ ಜಿಲ್ಲೆಗಳಲ್ಲಿ ನಡೆಯುವಂತಾಗಲಿ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಡಬ ತಾಲೂಕಿನ ಕೊಂಬಾರಿನಲ್ಲಿ ಭಾನುವಾರ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ತೆಂಗಿನ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಸಚಿವ ಅಂಗಾರ,
ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಕಡಬ ತಾ.ಪಂ. ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಉಪಾಧ್ಯಕ್ಷೆ ಜಯಂತಿ ಆರ್ ಗೌಡ, ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್, ಪುತ್ತೂರು ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್, ಕಡಬ ತಹಶಿಲ್ದಾರ್ ಅನಂತ ಶಂಕರ್, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಆರ್. ರವಿಕುಮಾರ್, ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಪತ್ರಕರ್ತ ಲೋಕೇಶ್ ಪೆರ್ಲಂಪಾಡಿ ಕಾರ್ಯಕ್ರಮ ನಿರೂಪಿಸಿದರು.

ನಿಮ್ಮದೊಂದು ಉತ್ತರ