ತಾಲೂಕು ಸುದ್ದಿ

ಬೆಳ್ತಂಗಡಿ ಸರಕಾರಿ ಗ್ರೂಪ್ ‘ಡಿ ನೌಕರರ ಸಂಘದ ಪದಾಧಿಕಾರಿಗಳ ಪದಗ್ರಹಣ ಮತ್ತು ನಿವೃತ್ತ ನೌಕರರಿಗೆ ಸನ್ಮಾನ

ಬೆಳ್ತಂಗಡಿ: ದ.ಕ ಜಿಲ್ಲಾ ಸರಕಾರಿ ಗ್ರೂಪ್ ಡಿ ನೌಕರರ ಸಂಘ ಬೆಳ್ತಂಗಡಿ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮ ಫೆ.9ರಂದು ಬೆಳ್ತಂಗಡಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಭಾಭವನದಲ್ಲಿ ಜರುಗಿತು.


ದ.ಕ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಪಿಕೆ ಕೃಷ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ದ.ಕ ಜಿಲ್ಲಾ ಸರಕಾರಿ ಗ್ರೂಪ್ ಡಿ ನೌಕರರ ಸಂಘದ ಅಧ್ಯಕ್ಷ ಪ್ರವೀಣ್ ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಇದರ ಸಂಘಟನಾ ಕಾಯ೯ದಶಿ೯ ಜಯಕೀತಿ೯ ಜೈನ್ ,ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ಪ್ರಭಾರ ಅಧ್ಯಕ್ಷ ಜಯರಾಜ್ ಜೈನ್, ದ.ಕ ಜಿಲ್ಲಾ ಸರಕಾರಿ ಗ್ರೂಪ್ ಡಿ ನೌಕರರ ಸಂಘದ ಮಾಜಿ ಅಧ್ಯಕ್ಷ ಫ್ರಾಂಕಿ ಪ್ರಾನ್ಸಿಸ್ ಕುಟಿನ್ಹ, ಮಾಜಿ ಪ್ರಧಾನ ಕಾರ್ಯದರ್ಶಿ ಸಿರಿಲ್ ರಾಬರ್ಟ್ ಡಿ’ಸೋಜ,ತೋಟಗಾರಿಕಾ ಇಲಾಖಾ ಸಹಾಯಕ ನಿದೇ೯ಶಕ ಸಂಜೀವ, ಪುತ್ತೂರು ತಾಲೂಕು ಅಧ್ಯಕ್ಷ ದೇವಮ್ಮ, ಮಾಜಿ ಅಧ್ಯಕ್ಷ ದಾಮೋದರ, ಜಿಲ್ಲಾ ಸಂಘಟನಾ ಕಾಯ೯ದಶಿ೯ ಕೊರಗಪ್ಪ , ನೂತನ ಅಧ್ಯಕ್ಷ ಜಯಶೀಲಾ ಯಲಿಗಾರ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ದ.ಕ ಜಿಲ್ಲಾ ಸರಕಾರಿ ಗ್ರೂಪ್ ಡಿ ನೌಕರರ ಸಂಘ ಬೆಳ್ತಂಗಡಿ ಶಾಖೆಯ ಅಧ್ಯಕ್ಷ ಕೃಷ್ಣ ಪೂರ್ಜೆ ಧರ್ಮಸ್ಥಳ, ಉಪಾಧ್ಯಕ್ಷೆ ಕವಿತಾ ಭಜಂತ್ರಿ, ಕಾರ್ಯದರ್ಶಿ ಶಾಂತಪ್ಪ ಬಿ ಅಳಗುಂಡಿ ಹಾಗೂ ಇತರ ಪದಾಧಿಕಾರಿಗಳು, ಸಂಘದ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. ಸರಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ರಘಪತಿ ಭಟ್ ಕಾಯ೯ಕ್ರಮ ನಿವ೯ಹಿಸಿದರು.

ನಿಮ್ಮದೊಂದು ಉತ್ತರ