ಬೆಳ್ತಂಗಡಿ: ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವುದಕ್ಕಾಗಿ ಬೆಳ್ತಂಗಡಿ ತಾಲೂಕು ಪಂಚಾಯತದಲ್ಲಿ ಸಂಯೋಜಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸುನೀತಾ ಮಂಜುನಾಥ್ ಅವರು ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಇವರು 2020-21ನೇ ಸಾಲಿನಲ್ಲಿ ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಹಾಗೂ ವಿಜಯಪುರ ಜಿಲ್ಲೆಯಲ್ಲಿ ವಿಶೇಷ ಐ.ಇ.ಸಿ ಸಂಯೋಜಕರಾಗಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿದಕ್ಕಾಗಿ ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಎ.9ರಂದು ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ. ಓಡಿಲ್ನಾಳ ಗ್ರಾಮದ ಅಶ್ವತ್ಥನಗರ ನಿವಾಸಿಯಾಗಿರುವ ಸುನೀತಾ ಅವರು ಶಾಸಕ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿ ಮಂಜುನಾಥ್ ಅವರ ಪತ್ನಿಯಾಗಿದ್ದಾರೆ. ಪ್ರಸ್ತುತ ಇವರು ಬೆಳ್ತಂಗಡಿ ತಾಲೂಕು ಪಂಚಾಯತ್ನಲ್ಲಿ ಉದ್ಯೋಗ ಖಾತರಿ ಯೋಜನೆಯ ಶಿಕ್ಷಣ ಸಂವಹನ, ಸಂಯೋಜಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.