ಬೆಳ್ತಂಗಡಿ: ಬೆಳ್ತಂಗಡಿ ತೋಟಗಾರಿಕಾ ಇಲಾಖೆಯಲ್ಲಿ ಸಹಾಯಕ ತೋಟಗಾರಿಕೆ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಸಂಜೀವ ಅವರು ಸರ್ಕಾರಿ ಸೇವೆಯಿಂದ ಮೇ 31ರಂದು ವಯೋನಿವೃತ್ತಿ ಹೊಂದಿದ್ದಾ ರೆ. ಇವರಿಗೆ ಬೀಳ್ಕೊಡುಗೆ ಸಮಾರಂಭವನ್ನು ತೋಟಗಾರಿಕೆ ಇಲಾಖೆ ಕಛೇರಿ, ಬೆಳ್ತಂಗಡಿಯಲ್ಲಿ ಏರ್ಪಡಿಸಲಾಗಿತ್ತು. ಸಮಾರಂಭದ ಅಧ್ಯಕ್ಷತೆಯನ್ನು ತೋಟಗಾರಿಕೆ ಉಪ ನಿರ್ದೇಶಕರಾದ ಹೆಚ್. ಆರ್ ನಾಯ್ಕ ರವರು ವಹಿಸಿದ್ದರು. ಜಿಲ್ಲೆಯ ಎಲ್ಲಾ ತಾಲೂಕು ನಿರ್ದೇಶಕರು, ತೋಟಗಾರಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಾಗಿದ್ದರು.