ತಾಲೂಕು ಸುದ್ದಿ

ಬಂಗೇರರ ಕುಟುಂಬಸ್ಥರಿಂದ ಬೆಳ್ತಂಗಡಿ ಆಸ್ಪತ್ರೆಗೆ ಪಲ್ಸ್ ಆಕ್ಸಿಮೀಟರ್-125 ಮಂದಿಗೆ ಆಹಾರ ಕಿಟ್ ವಿತರಣೆ

ಬೆಳ್ತಂಗಡಿ: ಮಾಜಿ ಶಾಸಕ ಕೆ. ವಸಂತ ಬಂಗೇರರವರ ಕುಟುಂಬದ ವತಿಯಿಂದ ಕೋವಿಡ್ ಸಂತ್ರಸ್ತರ ಚಿಕಿತ್ಸೆಗೆ ನೆರವಾಗಲು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ೫೦ ಪಲ್ಸ್ ಆಕ್ಸಿಮೀಟರ್ ಮತ್ತು ೨೦೦ ಮಾಸ್ಕ್ ಹಸ್ತಾಂತರ, ಬೆಳ್ತಂಗಡಿ ನಗರ ಪಂಚಾಯತದ ೧೬ ಮಂದಿ ಪೌರ ಕಾರ್ಮಿಕರು ಮತ್ತು ತಾಲೂಕಿನ ೭೦ ಮಂದಿ ಗೃಹರಕ್ಷಕ ದಳದ ಸಿಬ್ಬಂದಿಗಳಿಗೆ ಆಹಾರ ಕಿಟ್ ಹಾಗೂ ಮಾಸ್ಕ್, ತಾಲೂಕಿನ ಅರ್ಹ ೧೫ ಬಡ ಕುಟುಂಬಗಳಿಗೆ ಆಹಾರದ ಕಿಟ್ ವಿತರಣಾ ಕಾರ್ಯಕ್ರಮ ಜೂ.21 ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಂಕೀರ್ಣದ ಆಶಾ ಸಾಲಿಯಾನ್ ಸಭಾಂಗಣದಲ್ಲಿ ಜರುಗಿತು.
ಮಾಜಿ ಶಾಸಕ ಕೆ. ವಸಂತ ಬಂಗೇರ ಕಾರ್ಯಕ್ರಮವನ್ನು ನೆರವೇರಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಬಂಗೇರರ ಹಿರಿಯ ಪುತ್ರಿ ಪ್ರೀತಿತಾ ವಿಜೇತ್, ಅಳಿಯ ಧರ್ಮವಿಜೇತ್, ಕಿರಿಯ ಪುತ್ರಿ ಬಿನುತಾ ಸಂಜೀವ್, ಅಳಿಯ ಸಂಜೀವ್ ಆನೆಕಲ್, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ರಂಜನ್ ಜಿ ಗೌಡ, ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷ ಬಿ.ಕೆ ವಸಂತ್, ಪಟ್ಟಣ ಪಂಚಾಯತ್ ಸದಸ್ಯರಾದ ಜಗದೀಶ್ ಡಿ ಮತ್ತು ಜನಾರ್ದನ ಕುಲಾಲ್, ಅನುಪ್ ಜೆ. ಬಂಗೇರ, ಆರೋಗ್ಯ ಇಲಾಖೆಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ, ಪೌರಕಾರ್ಮಿಕರು, ಗೃಹರಕ್ಷಕ ದಳದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಗೃಹರಕ್ಷಕ ದಳದ ಸಿಬ್ಬಂದಿ ವಿನೋದ್‌ರಾಜ್ ಆಳ್ವ ವಂದಿಸಿದರು.

ನಿಮ್ಮದೊಂದು ಉತ್ತರ