ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಬೆಳ್ತಂಗಡಿ ಕೃಷಿ ಇಲಾಖೆಯ ವತಿಯಿಂದ ತಾಲೂಕಿನಲ್ಲಿ 2020-21ನೇ ಸಮಗ್ರ ಕೃಷಿ ಅಭಿಯಾನ ಯೋಜನೆಯಡಿ ಇಲಾಖೆ ನಡಿಗೆ ಮನೆ ಬಾಗಿಲಿಗೆ ಹಾಗೂ ಹಡೀಲು ಬಿದ್ದ ಭೂಮಿಯಲ್ಲಿ ಭತ್ತದ ಕೃಷಿಗೆ ಕಾರ್ಯಕ್ರಮಕ್ಕೆ ಜೂ.28ರಂದು ಚಾಲನೆ ನೀಡಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಗುರುವಾಯನಕೆರೆ ಕೆಲ್ಲಗುತ್ತು ಸಖ್ರಬೈಲು ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ವೇಳೆ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ತಹಶೀಲ್ದಾರ್ ಮಹೇಶ್ ಜೆ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಮೇಲಂತಬೆಟ್ಟು ಗ್ರಾ.ಪಂ ಅಧ್ಯಕ್ಷೆ ಹರಿಣಾಕ್ಷಿ , ಪುತ್ತೂರು ವಿಭಾಗದ ಉಪಕೃಷಿ ನಿರ್ದೇಶಕ ಶಿವಶಂಕರ್ ದಾನೆಗೊಂಡ, ಸಹಾಯಕ ಕೃಷಿ ನಿರ್ದೇಶಕ ರಂಜಿತ್ ಉಪಸ್ಥಿತಿ ಇದ್ದರು. ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ವಂದಿಸಿದರು .