ತಾಲೂಕು ಸುದ್ದಿ

ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳ ಮೀಸಲಾತಿ ಕರಡು ಪ್ರತಿ ಪ್ರಕಟ- ಆಕ್ಷೇಪಣೆಗೆ ಅವಕಾಶ 

ಬೆಳ್ತಂಗಡಿ: ರಾಜ್ಯಾದ್ಯಂತ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಸದಸ್ಯರ ಅಧಿಕಾರದ ಅವಧಿ ಕಳೆದ ಎಪ್ರಿಲ್ ತಿಂಗಳಲ್ಲಿ ಕೊನೆಗೊಂಡಿದೆ. ಆದರೆ ದೇಶದಾದ್ಯಂತ ಕೊರೊನಾ ಸಾಂಕ್ರಾಮಿಕ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮೇ ತಿಂಗಳಲ್ಲಿ ನಡೆಯಬೇಕಾಗಿದ್ದ ಜಿ.ಪಂ ಮತ್ತು ತಾ.ಪಂ ಚುನಾವಣೆಯನ್ನು ಮುಂದೂಡಲಾಗಿತ್ತು.
ಇದೀಗ ಕೋವಿಡ್ ಸೋಂಕು ಪ್ರಕರಣಗಳಲ್ಲಿ ನಿಯಂತ್ರಣ ಸಾಧಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ರಾಜ್ಯಾದ್ಯಂತ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಸಿದ್ಧತೆ ನಡೆಸಿದ್ದು, ಎಲ್ಲಾ ಕ್ಷೇತ್ರಗಳ ಮೀಸಲಾತಿ    ಕರಡು   ಪಟ್ಟಿ ಯನ್ನು ಪ್ರಕಟಗೊಳಿಸಿದ್ದು, ಆಕ್ಷಷೇಪಣೆ ಗೆ 7 ದಿನ ಅವಕಾಶ ಇದೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನಲ್ಲಿ ಜಿಲ್ಲಾ ಪಂಚಾಯತ್ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಹೆಸರು ಮತ್ತು ಮೀಸಲಾತಿಗಳ ವಿವರ ಈ ಕೆಳಗಿನಂತಿದೆ.

ನಿಮ್ಮದೊಂದು ಉತ್ತರ