ಬೆಳ್ತಂಗಡಿ: ಮುಂದಿನ ದಿನಗಳಲ್ಲಿ ನಡೆಯುವ ಬಕ್ರೀದ್ ಹಬ್ಬದ ಪ್ರಯುಕ್ತ ಬೆಳ್ತಂಗಡಿ ಠಾಣೆಯಲ್ಲಿ ಜು.14 ರಂದು ಶಾಂತಿಸಭೆ ನಡೆಯಿತು.
ಬೆಳ್ತಂಗಡಿ ಠಾಣಾ ಪಿಎಸ್‌ಐ ನಂದಕುಮಾರ್ ಎಮ್ ಎಮ್ ರವರು ಮಾತನಾಡಿ, ಹಿಂದು-ಮುಸ್ಲಿಂ ಬಾಂಧವರು ಸಹೋದರತ್ವದಿಂದ, ಸಹಬಾಳ್ವೆಯೊಂದಿಗೆ ಹಬ್ಬವನ್ನು ಆಚರಿಸಬೇಕು. ಅಕ್ರಮ ಗೋ ಸಾಗಾಟ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ರಾತ್ರಿ ವೇಳೆಯಲ್ಲಿ ಅನಾವಶ್ಯಕವಾಗಿ ತಿರುಗಾಡುವುದು ಕಂಡು ಬಂದಲ್ಲಿ ಅಂತವರ ವಿರುದ್ಧ ಸೂಕ್ತ ಕಾನುನು ಕ್ರಮ ಜರುಗಿಸಲಾಗುವುದು ಎಂದರು.
ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ಬಿ ಮಾತನಾಡಿ ಬೆಳ್ತಂಗಡಿ ತಾಲೂಕಿನಲ್ಲಿ ಕಾನೂನಿಗೆ ಎಲ್ಲರೂ ಗೌರವ ನೀಡಬೇಕು. ತಾಲೂಕಿನಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದ್ದಲ್ಲಿ ತಮ್ಮ ಬೀಟ್ ಪೊಲೀಸ್ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು ಎಂದರು.
ಸಭೆಯಲ್ಲಿ ಬೆಳ್ತಂಗಡಿ ವ್ಯಾಪ್ತಿಯ ಹಿಂದೂ,ಮುಸ್ಲಿಂ,ಕ್ರೈಸ್ತ ಬಾಂಧವರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಬೆಳ್ತಂಗಡಿ ಠಾಣಾ ಎಎಸ್‌ಐ ರಾಮಯ್ಯ
ಹೆಗ್ಡೆ ರವರು ಸ್ವಾಗತಿಸಿ ವಂದಿಸಿದರು.