ತಾಲೂಕು ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಮಾನ ಹಾನಿಕಾರಕ ಪೋಸ್ಟ್:ಸೂಕ್ತ ಕ್ರಮಕ್ಕೆ ಯುವ ಮೊಛಾ೯ದಿಂದ ಮನವಿ

ಲಾಯಿಲ ಗ್ರಾಮದ ಬೂತ್ 68 ರ ಯುವ ಮೋರ್ಚಾ ಸಂಚಾಲಕರಾದ ಸುಶನ್ ಚಂದ್ರ ಇವರ ಬಗ್ಗೆ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮಾನ ಹಾನಿಕರ ಪೋಸ್ಟ್ ಪ್ರಕಟಿಸಿದ ಹಿನ್ನಲೆಯಲ್ಲಿ ಆ.21ರಂದು ತಾಲೂಕು ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ತೆರಳಿ ಕಿಡಿಗೇಡಿಗಳ
ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿಲಾಯಿತು.


ಈ ಸಂದರ್ಭದಲ್ಲಿ ತಾಲೂಕು ಯುವ ಮೋರ್ಚಾ ಅಧ್ಯಕ್ಷರಾದ ಯಶವಂತ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಉಪಾಧ್ಯಕ್ಷರಾದ ಪ್ರಮೋದ್ ದಿಡುಪೆ,ಲಾಯಿಲ ಶಕ್ತಿ ಕೇಂದ್ರ ಅಧ್ಯಕ್ಷರಾದ ಸುಧಾಕರ್ b. l ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗಣೇಶ್ ಆರ್. ಮತ್ತು ಪಕ್ಷದ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

 

ನಿಮ್ಮದೊಂದು ಉತ್ತರ