ಧಮ೯ಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯಶಸ್ವೀ 2 ವರುಷ ಪೂರೈಸಿದ ಹಿನ್ನಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಇವರು ಇಂದು ಆ.27ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಶ್ರೀ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಬಿ.ಜೆ.ಪಿ ಮಂಡಲವತಿಯಿಂದ ಅಭಿನಂದನೆ:
ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ಯಶಸ್ವಿ ಎರಡು ವರ್ಷ ಪೂರೈಸಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷಜಯಂತ ಕೋಟ್ಯಾನ್ , ಪ್ರಧಾನ ಕಾರ್ಯದರ್ಶಿ ಶ್ರೀ ನಿವಾಸ ರಾವ್ , ಹಿರಿಯ ಮುಖಂಡರ ರತ್ನವಮ೯ ಜೈನ್ ಉಪಸ್ಥಿತಿ ಇದ್ದರು.