ಜಿಲ್ಲಾ ವಾರ್ತೆತಾಲೂಕು ಸುದ್ದಿರಾಜ್ಯ ವಾರ್ತೆ

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಗಾಂಧಿಸ್ಮೃತಿ ಮತ್ತು ವ್ಯಸನಮುಕ್ತ ಸಾಧಕರ ಸಮಾವೇಶ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಧರ್ಮಸ್ಥಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ ಜಿಲ್ಲೆ ಇದರ ವತಿಯಿಂದ ಗಾಂಧೀ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ `ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ’ “ಗಾಂಧಿ ಸ್ಮೃತಿ ಮತ್ತು ವ್ಯಸನಮುಕ್ತ ಸಾಧಕರ ಸಮಾವೇಶ” ಅ.2ರಂದು ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ಜರುಗಿತು.


ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ವಹಿಸಿದ್ದರು.
ಜಾಥಾವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ವಿ. ರಾಮಸ್ವಾಮಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್, ಸಮಾಜ ಸೇವಕ ಮುಂಬೈಯ ಆರ್.ಬಿ ಹೆಬ್ಬಳ್ಳಿ, ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲ್ಯಾನ್, ಉಡುಪಿ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಸ್ ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಯೋಜನೆಯ ಕಾರ್ಯನಿರ್ವಹಕ ನಿರ್ದೇಶಕ ಡಾ. ಎಲ್.ಹೆಚ್ ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಎನ್.ಎ ರಾಮಚಂದ್ರ, ಜನಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷರುಗಳಾದ ಶಾರದ ರೈ ಬೆಳ್ತಂಗಡಿ, ವಿಶ್ವನಾಥ ರೈ ಸುಳ್ಯ, ಮಹಾಬಲ ರೈ ಪುತ್ತೂರು, ಮಹಾಬಲ ಚೌಟ ಮಂಗಳೂರು, ಯೋಜನೆಯ ನಿವಾ೯ಹಣಾ

ಧಿಕಾರಿಅನಿಲ್ ಕುಮಾರ್, ಡಾ.ಶ್ರೀನಿವಾಸ ಭಟ್
ದ.ಕ ಜಿಲ್ಲಾ ನಿರ್ದೇಶಕರುಗಳಾದ ಪ್ರವೀಣ್ ಕುಮಾರ್ ಹಾಗೂ ಸತೀಶ್ ಶೆಟ್ಟಿ ಉಪಸ್ಥಿತ

ರಿದ್ದರು.ದ.ಕ ಜಿಲ್ಲಾ ನಿದೇ೯ಶಕ ಸತೀಶ್ ಶೆಟ್ಟಿ ಸ್ವಾಗತಿಸಿದರು. ಡಾ. ಎಲ್.ಹೆಚ್ ಮಂಜುನಾಥ ಪ್ರಸ್ತಾವಿಕವಾಗಿ ಮಾತನಾಡಿದರು. ಜಯರಾಮ ಪಾಟೀಲ, ಕು: ಕೀತ೯ನಾ, ಶ್ರೀಮತಿ ಲತಾ ಗಣೇಶ್ ಅನುಭವ ಹಂಚಿಕೊಂಡರು. ಯೋಜನಾಧಿಕಾರಿಗಳಾದ ಯಶವಂತ್ ಮತ್ತು ಮೋಹನ್ ಕೆ. ಕಾಯ೯ಕ್ರಮ ನಿರೂಪಿಸಿದರು. ಯೋಜನಾಧಿಕಾರಿ ಜಯಕರ ಶೆಟ್ಟಿ ವಂದಿಸಿದರು.

ನಿಮ್ಮದೊಂದು ಉತ್ತರ