ತಾಲೂಕು ಸುದ್ದಿ

ಧರ್ಮಸ್ಥಳ: 23ನೇ ವರ್ಷದ ಭಜನಾ ತರಬೇತಿ ಕಮ್ಮಟದ ಸಮಾರೋಪ ಸಮಾರಂಭ*

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಅ.1 ರಿಂದ 7 ದಿನಗಳ ಕಾಲ ನಡೆದ 23 ನೇ ವರ್ಷದ ಭಜನಾ ತರಬೇತಿ ಕಮ್ಮಟದ ಸಮಾರೋಪ ಸಮಾರಂಭ ಅ.7 ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಜರುಗಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಡನೀರು ಮಠ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನದ ಪರಮಪೂಜ್ಯ ಗುರುಗಳಾದ ಶ್ರೀ ಸಚ್ಚಿದಾನಂದ ಭಾರತೀ ಪಾದಂಗಳವರುಕಾರ್ಯಕ್ರಮದಲ್ಲಿ ದಿವ್ಯ ಉಪಸ್ಥಿತರಿದ್ದು ಆಶೀರ್ವಚನ ನೀಡಿದರು.

ಮಾಣಿಲ ಶ್ರೀ ಧಾಮದ ಮೋಹನದಾಸ ಸ್ವಾಮೀಜಿ, ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು,  ಮಂಗಳೂರು ಕಲ್ಕೂರ ಪ್ರತಿಷ್ಠಾನದ ಪ್ರದೀಪ್  ಕುಮಾರ್ ಕಲ್ಕೂರ, ಡಿ. ಹರ್ಷೇಂದ್ರ ಕುಮಾರ್ ಧರ್ಮಸ್ಥಳ  ವೇದಿಕೆಯಲ್ಲಿ ಗೌರವ ಉಪಸ್ಥಿತರಿದ್ದರು.

ಭಜನಾ ಪರಿಷತ್ ಅಧ್ಯಕ್ಷ ಬಾಲಕೃಷ್ಣ ಪಂಜ, ಭಜನಾ ಪರಿಷತ್ ಕಾರ್ಯದರ್ಶಿ ಜಯರಾಮ ನೆಲ್ಲಿತ್ತಾಯ,ಭಜನಾ ಕಮ್ಮಟದ ಕೋಶಾಧಿಕಾರಿ ಡಿ. ಧರ್ಣಪ್ಪ, ಶ್ರೀನಿವಾಸ ರಾವ್, ಯಕ್ಷಗಾನ ಕಲಾವಿದ ಉಜಿರೆ ಅಶೋಕ್ ಭಟ್, ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸ್ಂಟ್ ಪಾಯಿಸ್, ಶ್ರೀನಿವಾಸ ರಾವ್ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ, ಮೇಲ್ವಿಚಾರಕರು, ಕ್ಷೇತ್ರದ ವಿವಿಧ ವಿಭಾಗದ ಪ್ರಮುಖರು, ಭಜನಾ ಕಮ್ಮಟದ ಪದಾಧಿಕಾರಿಗಳು, ವಿವಿಧ ಭಜನಾ ಮಂಡಳಿಗಳಿಂದ ಆಗಮಿಸಿದ ಶಿಬಿರಾರ್ಥಿಗಳು, ಮೊದಲಾದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಶಾಂತಿವನ ಟ್ರಸ್ಟ್ ನಿರ್ದೇಶಕ ಡಾ| ಐ ಶಶಿಕಾಂತ ಜೈನ್ ಓಂಕಾರ ಪಠಿಸಿದರು, ಉಪ್ಪುಂದ ರಾಜೇಶ್ ಪಡಿಯಾರ್ ಭಜನೆ ಹಾಡಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿ, ಕಾರ್ಯದರ್ಶಿ ಮಮತಾ ರಾವ್ ವರದಿ ವಾಚಿಸಿದರು. ಇದೇ ವೇಳೆ ರಮೇಶ್ ಕಲ್ಮಾಡಿ,ಶಂಕರ ದಾಸ್  ಮತ್ತು ತಂಡದವರಿಂದ ನೃತ್ಯಭಜನಾ ಪ್ರಾತ್ಯಕ್ಷಿಕೆ ನಡೆಯಿತು.

ನಿಮ್ಮದೊಂದು ಉತ್ತರ