ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ಸಾಹಿತ್ಯ ಸಮ್ಮೇಳನ-89ನೇ ಅಧಿವೆಶನವು ಕಾರ್ಯಕ್ರಮವು ಇಂದು(ಡಿ.3) ಅಮೃತವರ್ಷಿಣಿ ಸಭಾ ಭವನದಲ್ಲಿ ಜರುಗಿತು.
ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು ಹಿರಿಯ ಸಾಹಿತಿ ಡಾ. ಮಲ್ಲೇಪುರಂ ಜಿ. ವೆಂಕಟೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಾಹಿತಿ ಡಾ. ಗಜಾನನ ಶರ್ಮ, ಕಿರುಚಿತ್ರ ನಿರ್ದೇಶಕ ಡಾ. ಪಿ.ಚಂದ್ರಿಕಾ ಹಾಗೂ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿ.ವಿ ವಿಶ್ರಾಂತ ನಿರ್ದೇಶಕ ಡಾ. ಕೆ.ಪಿ ಪುತ್ತೂರಾಯ, ಶಾಸಕ ಹರೀಶ್ ಪೂಂಜ, ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ ಶ್ರೀನಾಥ್, ಧರ್ಮಸ್ಥಳದ ಡಿ ಹರ್ಷೇಂದ್ರ ಕುಮಾರ್, ಡಿ.ಸುರೇಂದ್ರ ಕುಮಾರ್, ಡಾ. ಕುಮಾರ್ ಹೆಗ್ಡೆ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.