ಬೆಳ್ತಂಗಡಿ: ಕೃಷಿಕರ ಅಭ್ಯುದಯಕ್ಕಾಗಿ ಬೆಳ್ತಂಗಡಿ ತಾಲೂಕಿನಾದ್ಯಂತ ಅನಿಯಮಿತವಾಗಿ ವಿದ್ಯುತ್ ಪೂರೈಸಲು ರೂ.33.72 ಕೋಟಿ ವೆಚ್ಚದಲ್ಲಿ ಹೆಚ್ಚುವರಿಯಾಗಿ 538 ವಿದ್ಯುತ್ ಪರಿವರ್ತಕಗಳನ್ನು ಅಳವಡಿಸುವ ಕಾಮಗಾರಿಯ ಶಿಲಾನ್ಯಾಸ ಸಮಾರಂಭ ಕಾರ್ಯಕ್ರಮ ಮಾ.12 ರಂದು ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾಭವನದಲ್ಲಿ ಜರುಗಿತು.
ಶಿಲಾನ್ಯಾಸವನ್ನು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ದ.ಕ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ನೆರವೇರಿಸಿ,ಮಾತನಾಡಿ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರ ಬೇಡಿಕೆಯಂತೆ 220 ಕೆ.ವಿ ವಿದ್ಯುತ್ ಸಬ್ ಸ್ಟೇಶನ್, ಕುತ್ಲೂರುನಲ್ಲಿ 110 ಕೆ.ವಿ ವಿದ್ಯುತ್ ಸಬ್ ಸ್ಟೇಶನ್, ಉಜಿರೆಗೆ 33 ಕೆ.ವಿ ಸಬ್ ಸ್ಟೇಶನ್ ಮಂಜೂರು ಮಾಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶಾಸಕ ಹರೀಶ್ ಪೂಂಜ ರವರು ವಹಿಸಿ ತಾಲೂಕಿನಲ್ಲಿ ಆಗಬೇಕಾದ ವಿದ್ಯುತ್ ಕಾಮಗಾರಿಗಳ ಬೇಡಿಕೆಯನ್ನು ಸಚಿವರ ಮುಂದಿಟ್ಟರು
ಮುಖ್ಯ ಅತಿಥಿಗಳಾಗಿ ಮಂಗಳೂರು ಲೋಕಸಭಾ ಕ್ಷೇತ್ರ ಸಂಸದರಾದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ,
ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ,
ಮೆಸ್ಕಂ ತಾಂತ್ರಿಕ ನಿದೇ೯ಶಕಿ ಡಿ.ಪದ್ಮಾವತಿ,ಮೆಸ್ಕಾಂ ಮಂಗಳೂರು ವಲಯದ ಮುಖ್ಯ ಇಂಜಿನಿಯರ್ ಪುಷ್ಪ, ಮೆಸ್ಕಾಂ ಮಂಗಳೂರು ವೃತ್ತದ ಅಧೀಕ್ಷಕ ಇಂಜಿನಿಯರ್ ಕೃಷ್ಣ ರಾಜು, ಕೆಪಿಟಿಸಿಎಲ್ ಅಧೀಕ್ಷಕ ಇಂಜಿನಿಯರ್ ರವಿಕಾಂತ್ ಕಾಮತ್ ಭಾಗವಹಿಸಿದ್ದರು.
ಎಲ್ಲಾ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಪಟ್ಟಣ ಪಂಚಾಯತ್ ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.
ಮಡಂತ್ಯಾರ್ ಮೆಸ್ಕಾಂನ ಲೀಲಾವತಿ ಇವರು ಪ್ರಾರ್ಥನೆ ಹಾಡಿದರು, ಶಿಕ್ಷಕ ಅಜಿತ್ ಕುಮಾರ್ ಕೊಕ್ರಾಡಿ ನಿರೂಪಿಸಿ, ಬೆಳ್ತಂಗಡಿ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಿ.ಎಚ್ ಶಿವಶಂಕರ್ ಧನ್ಯವಾದ ಗೈದರು.