ಬೆಳ್ತಂಗಡಿ: ರಾಷ್ಟ್ರೀಯ ಹಬ್ಬ ಹಾಗೂ ಮಹಾ ಪುರುಷರ ಜಯಂತಿ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ಬಸವ ಜಯಂತಿ ಆಚರಣೆ-2022 ಬೆಳ್ತಂಗಡಿ ಶ್ರೀ ಮಂಜುನಾಥ ಸ್ವಾಮಿ ಕಲಾ ಭವನ ದಲ್ಲಿ ಮೇ.3 ರಂದು ಜರುಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿದರು.ಬೆಳ್ತಂಗಡಿ ಪ.ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭದಲ್ಲಿ ಉಜಿರೆ ಶ್ರೀ ಧ.ಮಂ.ಕಾಲೇಜು ಸಹಾಯಕ ಪ್ರಾಧ್ಯಾಪಕ ಡಾ|ಹಳೆಮನೆ ರಾಜಶೇಖರ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಪ.ಪಂ ಮುಖ್ಯಾಧಿಕಾರಿ ಸುಧಾಕರ್, ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಹಶೀಲ್ದಾರರಾದ ಮಹೇಶ್ ಜೆ, ಮಾಳವ ಯಾನೆ ಮಲ್ಲವ ಸಮಾಜದ ಅಧ್ಯಕ್ಷ ಶಿವಶಂಕರ್, ವೀರಶೈವ ಲಿಂಗಾಯುತ ಸಂಘದ ಅಧ್ಯಕ್ಷ ರಮೇಶ್ ಉಪಸ್ಥಿತರಿದ್ದರು.
ಸುಭಾಶ್ ಜಾದವ್ ಸ್ವಾಗತಿಸಿದರು.ರಮೇಶ್ ಕಾಯ೯ಕ್ರಮ ನಿರೂಪಿಸಿ, ತಾರಕೇಶರಿ ವಂದಿಸಿದರು.