ತಾಲೂಕು ಸುದ್ದಿ

ಉಜಿರೆ ಮಹಿಳಾ ದೌಜ೯ನ್ಯ ಪ್ರಕರಣ ವಿರೋಧಿಸಿ ಅಹೋರಾತ್ರಿ ಧರಣಿ

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ನಗರ ನತ್ತು ಗ್ರಾಮೀಣ, ಕಾಂಗ್ರೆಸ್ ಮಹಿಳಾ ಘಟಕ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ, ಉಜಿರೆ ಮಹಿಳಾ ದೌರ್ಜನ್ಯ ಪ್ರಕರಣ ವಿರೋಧಿ ಹೋರಾಟ ಸಮಿತಿ, ದಲಿತ ಹಕ್ಕುಗಳ ರಕ್ಷಣಾ ಸಮಿತಿ, ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರರ ಸಂಘ, ಕ.ರಾ.ಋ. ಮುಕ್ತ ಹೋರಾಟ ಬೆಳ್ತಂಗಡಿ ತಾಲೂಕು ಸಮಿತಿ, ಜನವಾದಿ ಮಹಿಳಾ ಸಂಘಟನೆ ಬೆಳ್ತಂಗಡಿ ತಾಲೂಕು ಸಮಿತಿ ಹಾಗೂ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ಉಜಿರೆ ಮಹಿಳಾ ಅರೆಬೆತ್ತಲೆ ಪ್ರಕರಣ ವಿರೋಧಿಸಿ ಪ್ರತಿಭಟನೆ, ಬಿಜೆಪಿ ಸರಕಾರದ ಮಹಿಳಾ ವಿರೋಧಿ ಧೋರಣೆ ಖಂಡಿಸಿ ಮಹಿಳಾ ದೌರ್ಜನ್ಯ ವಿರೋಧಿಸಿ ಅಹೋರಾತ್ರಿ ಧರಣಿ ಮೇ.9 ರಂದು ಬೆಳ್ತಂಗಡಿ  ಮಿನಿ ವಿಧಾನ ಸೌಧ ಎದುರು ಪ್ರಾರಂಭವಾಗಿದೆ.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ ವಸಂತ ಬಂಗೇರ, ವಿಧಾನ ಪರಿಷತ್ ಶಾಸಕ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್, ಕಮ್ಯುನಿಸ್ಟ್ ಪಕ್ಷದ ನಾಯಕ ಬಿಎಂ ಭಟ್, ಬ್ಲಾಕ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್ ಕೆ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ರಂಜನ್ ಜಿ ಗೌಡ, ಅಭಿನಂದನ್, ಅಬ್ದುಲ್ ರಹಿಮಾನ್ ಪಡ್ಪು  ಉಪಸ್ಥಿತರಿದ್ದರು.

ನಿಮ್ಮದೊಂದು ಉತ್ತರ