ತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಸೋಲೂರು ಮಹಾ ಸಂಸ್ಥಾನದ ಪೀಠಾಧೀಶ ವಿಖ್ಯಾತನಂದ ಶ್ರೀಗಳಿಗೆ ಗುರು ವಂದನೆ

ಬೆಳ್ತಂಗಡಿ : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ಇದರ ಆಶ್ರಯದಲ್ಲಿ ಯುವವಾಹಿನಿ ಬೆಳ್ತಂಗಡಿ ಮತ್ತು ವೇಣೂರು ಘಟಕ ಹಾಗೂ ತಾಲೂಕಿನ ಬಿಲ್ಲವ ಸಂಘಗಳ ಒಕ್ಕೂಟದ ವೇದಿಕೆ ಸೋಲೂರು ಮಹಾ ಸಂಸ್ಥಾನದ ಪೀಠಾಧೀಶ ವಿಖ್ಯಾತಾನಂದ ಶ್ರೀಗಳ ಗುರು ವಂದನಾ ಕಾರ್ಯಕ್ರಮ ಮೇ 29 ರಂದು ಸಂಘದ ಸಭಾ ಭವನದಲ್ಲಿ ನಡೆಯಿತು.

ಶ್ರೀ ವಿಖ್ಯಾತಾನಂದ ಸ್ವಾಮೀಜಿ ನೂತನ ಆಡಳಿತ ಕಛೇರಿ ಉದ್ಘಾಟಿಸಿ ಆಶೀರ್ವಾಚನ ಆವೃತ್ತಿ. ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಸಂಘದ ಗೌರವಾಧ್ಯಕ್ಷ ಕೆ. ವಸಂತ ಬಂಗೇರ ಉದ್ಘಾಟಿಸಿದರು.

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್, ಬೆಳ್ತಂಗಡಿ ಬಿ ಜೆ ಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಆರ್ಯ ಈಡಿಗ ಸಂಘದ ಪ್ರಧಾನ ಕಾರ್ಯದರ್ಶಿ ಧರ್ಮವಿಜೇತ, ಗುರು ವಂದನಾ ನುಡಿ ಸಲ್ಲಿಸಿದ ಉಪನ್ಯಾಸಕ ಯೋಗೀಶ್ ಕೈರೋಡಿ, ಭಾಗವಹಿಸಿದ್ದರು.

ನಿಮ್ಮದೊಂದು ಉತ್ತರ