ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ, ಕರ್ನಾಟಕ ಅರಣ್ಯ ಇಲಾಖೆ, ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ , ವೇಣೂರು ವಲಯ ಇದರ ಸಂಯುಕ್ತ ಆಶ್ರಯದಲ್ಲಿ ರಾಜ್ಯಾದ್ಯಂತ ಸಾಮಾಜಿಕ ಅರಣೀಕರಣದ ಅಂಗವಾಗಿ ದಶಲಕ್ಷ ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮ ಜೂ.23 ರಂದು ಬಡಕೋಡಿ ಗ್ರಾಮದ ಎರ್ಮೋಡಿ ಅರಣ್ಯ ಪ್ರದೇಶದಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ದೇವರ ಕಾಡು ಸಸಿಯನ್ನು ವಿತರಿಸಿದರು, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಕೆರೆ ಅಂಗಳದಲ್ಲಿ ಸಸಿ ವಿತರಿಸಿ, ಹೊಸಂಗಡಿ ಗ್ರಾ.ಪಂ ಅಧ್ಯಕ್ಷ ಕರುಣಾಕರ ಪೂಜಾರಿ ಹಣ್ಣು ಹಂಪಲುಗಳ ಸಸಿ ವಿತರಿಸಿದರು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್ ನೆಟಲ್ ಕರ್ ಶಾಲಾ ವನದಲ್ಲಿ ಸಸಿ ವಿತರಿಸಿದರು.
ವೇದಿಕೆಯಲ್ಲಿ ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಐಎಫ್ ಎಸ್ ಆಶೀಶ್ ರೆಡ್ಡಿ, ಮೂಡಬಿದ್ರೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್, ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಧರ್ಮದರ್ಶಿ ಜೀವಂಧರ್ ಕುಮಾರ್, ಶೀಲಾ ಉಮೇಶ್ ಕತ್ತಿ ಸಂಪತ್ ಸಾಮ್ರಾಜ್ಯ ಉಪಸ್ಥಿತರಿದ್ದರು.
ಸನ್ಮಾನ ಕಾರ್ಯಕ್ರಮ:
ಪರಿಸರ ಸ್ನೇಹಿಗಳಾದ ಮಾಧವ ಉಳ್ಳಾಲ್, ರಾಮ ಕೃಷ್ಣ ಭಟ್ ಪೆರಿಂಜೆ ಇವರಿಗೆ ಪರಿಸರ ರತ್ನ ಪ್ರಶಸ್ತಿ ನೀಡಿ ಸನ್ಮಾನ ಕಾರ್ಯಕ್ರಮ ಜರುಗಿತು.
ಉಜಿರೆ ಎಸ್ ಡಿಎಂ ಕಾಲೇಜು ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು, ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ|ಎಲ್ ಹೆಚ್ ಮಂಜುನಾಥ್ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು, ಉಜಿರೆ ಎಸ್ ಡಿಎಂ ಕಾಲೇಜು ವಿದ್ಯಾರ್ಥಿಗಳಿಂದ ಪರಿಸರ ಗೀತೆಯನ್ನು ಹಾಡಿದರು, ನಿರ್ದೇಶಕ ಸತೀಶ್ ಶೆಟ್ಟಿ ಧನ್ಯವಾದ ಗೈದರು, ವಿವೇಕ್ ವಿ ಪಾಯಸ್, ಯಶವಂತ್ ಎಸ್ ನಿರೂಪಿಸಿದರು.