ಬೆಳ್ತಂಗಡಿ : ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಪದಾಧಿಕಾರಿಗಳು ಜು.16 ರಂದು ಭೇಟಿ ನೀಡಿ ಸಂಘದ ವತಿಯಿಂದ ಗೌರವಾರ್ಪಣೆ ಸಲ್ಲಿಸಿದರು.
ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಡ್ಕ,ಉಪಾಧ್ಯಕ್ಷ ಶೇಖರ ಬಂಗೇರ ಹೇರಾಜೆ, ಪ್ರಧಾನ ಕಾರ್ಯದರ್ಶಿ ಜಯವಿಕ್ರಮ ಕಲ್ಲಾಪು,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಜೀತಾ ವಿ. ಬಂಗೇರ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್, ನಿರ್ದೇಶಕರುಗಳಾದ ಸೂರ್ಯನಾರಾಯಣ ಡಿ. ಕೆ. ಪುರುಷೋತ್ತಮ ಡಿ.ಲಕ್ಷ್ಮಣ ಪೂಜಾರಿ, ಜಗದೀಶ್ ಡಿ. ಉಪಸ್ಥಿತರಿದ್ದರು