ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಆ.15ರಂದು ಆಚರಿಸಲಾಯಿತು.
ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಕೆ.ಎ.ಎಸ್ ಇವರು ಧ್ವಜಾರೋಹಣವನ್ನು ನೆರವೇರಿಸಿದರು.
ನಂತರ ಬೆಳ್ತಂಗಡಿ ಆಡಳಿತ ಮಿನಿ ವಿಧಾನ ಸೌಧದಿಂದ ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದವರೆಗೆ ಬೈಕ್ ರ್ಯಾಲಿ ಮೂಲಕ ಸಾಗಿ ಸಭಾ ಕಾರ್ಯಕ್ರಮವು ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ಜರುಗಿತು.
ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ ಶಾಸಕ ಹರೀಶ್ ರವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಪ್ರಖರ ವಾಗ್ಮಿ, ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ಮಲ್ಪೆ ಪ್ರಧಾನ ಭಾಷಣ ಮಾಡಿದರು.
ವೇದಿಕೆಯಲ್ಲಿ ಬೆಳ್ತಂಗಡಿ ಪ.ಪಂ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, , ತಾಲೂಕು ಪಂಚಾಯತ್ ಕಾರ್ಯನಿರ್ವಹನಾಧಿಕಾರಿ ಕುಸುಮಾಧರ್ ಬಿ, ಸರ್ಕಲ್ ಇನ್ಸ್ ಪೆಕ್ಟರ್ ಶಿವಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ, ಪಿಡ್ಲ್ಯುಡಿ ಸ.ಕಾ.ಇಂಜಿನಿಯರ್ ಶಿವಪ್ರಸಾದ್ ಅಜಿಲ, ಸಿಡಿಪಿಒ ಪ್ರಿಯಾ ಆಗ್ನೇಸ್, ಮುಖ್ಯಾಧಿಕಾರಿ ರಾಜೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ನಿವೃತ್ತ ಸೇನಾನಿ ಎಂ.ಆರ್ ಜೈನ್, ಗೃಹರಕ್ಷಕ ದಳದ ಘಟಕಾಧಿಕಾರಿ ಜಯಾನಂದ ಮೊದಲಾದವರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಸರ್ಕಾರದ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
,