ತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಡಾ। ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ

ಬೆಳ್ತಂಗಡಿ: ಶಿಕ್ಷಕರ ದಿನಾಚರಣೆ ಸಮಿತಿ, ಬೆಳ್ತಂಗಡಿ ,ತಾಲೂಕು ಪಂಚಾಯತ್ ಬೆಳ್ತಂಗಡಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪಟ್ಟಣ ಪಂಚಾಯತ್ ಬೆಳ್ತಂಗಡಿ, ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಡಾ। ಸರ್ವಪಲ್ಲಿ ರಾಧಾಕೃಷ್ಣನ್ ಇ ವರ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ ಸೆ . 5ರಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನ ಬೆಳ್ತಂಗಡಿಯಲ್ಲಿ ಜರುಗಿತು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಹರೀಶ್ ಪೂಂಜ ಕಾಯ೯ಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಶ್ರೀ. ಧ.ಮ. ವಸತಿ ಪದವಿಪೂರ್ವ ಕಾಲೇಜು ಉಜಿರೆಯ ಪ್ರಾಂಶುಪಾಲ, ಡಾ| ಕೃಷ್ಣಮೂರ್ತಿ ಟಿ. ದಿಕ್ಕೂಚಿ ಭಾಷಣ ಮಾಡಿದರು.
ಕಾಯ೯ಕ್ರಮದಲ್ಲಿ 2021-22ನೇ ಸಾಲಿನ ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದು ಶಿಕ್ಷಕರನ್ನು ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. 2021-22ನೇ ಸಾಲಿನಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ 100ಫಲಿತಾಂಶ ಪಡೆದು ಶಾಲೆಗಳನ್ನು ಗೌರವಿಸಲಾಯಿತು. ಅಲ್ಲದೆ ಎಸೆಸೆಲ್ಸಿ ಪರೀಕ್ಷೆಯಲ್ಲಿ 625 ಪೂಣ೯ ಅಂಕಗಳನ್ನು ಪಡೆದ ಐದು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ, ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಕುಸುಮಾಧರ್ ಹಾಗೂ ಶಿಕ್ಷಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

ನಿಮ್ಮದೊಂದು ಉತ್ತರ