ಬೆಳ್ತಂಗಡಿ: ರಾಷ್ಟ್ರೀಯ ಹಬ್ಬ ಹಾಗೂ ಮಹಾ ಪುರುಷರ ಜಯಂತಿ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168 ನೇ ಜನ್ಮದಿನಾಚರಣೆ ಕಾಯ೯ಕ್ರಮ ಸೆ.10ರಂದು ಶ್ರೀ ಗುರುದೇವ ಮಠ ದೇವರಗುಡ್ಡೆ ಕಲ್ಮಂಜದಲ್ಲಿ ಜರುಗಿತು.
ಕಾಯ೯ಕ್ರಮದಲ್ಲಿ ಶ್ರೀ ಗುರುದೇವ ಮಠ ದೇವರಗುಡ್ಡೆಯ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು.
ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯನ್ನು ವಹಿಸಿದ್ದರು. ನಾವೂರು ಆರೋಗ್ಯ ಕ್ಲಿನಿಕ್ ನ ಡಾ. ಪ್ರದೀಪ್ ನಾರಾಯಣ ಗುರುಗಳ ಬಗ್ಗೆ ಸಂದೇಶ ನೀಡಿದರು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ತಹಶೀಲ್ದಾರ್ ಪೃಥ್ವಿ ಸಾನಿಕಂ,ಎಪಿಎಂಸಿ ಕಾರ್ಯದಶಿ೯ ರವೀಂದ್ರ, ನ.ಪಂ ಮುಖ್ಯಾಧಿಕಾರಿ ರಾಜೇಶ್, ಅಕ್ರಮ-ಸಕ್ರಮ ಸಮಿತಿ ಸದಸ್ಯ ಜಯಂತ ಕೋಟ್ಯಾನ್, ವಿವಿಧ ಗ್ರಾ.ಪಂ.ಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.