ತಾಲೂಕು ಸುದ್ದಿ

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿಯಲ್ಲಿ ಮೂರನೇ ವರ್ಷದ ದೋಸೆ ಹಬ್ಬ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾಬೆಳ್ತಂಗಡಿ ಮಂಡಲ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೀಪಾವಳಿ ದೋಸೆ ಹಬ್ಬ ಅ.24 ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಜರುಗಿತು.

ಇಂಧನ ಸಚಿವ ಸುನಿಲ್ ಕುಮಾರ್ ದೋಸೆ ಹಬ್ಬಕ್ಕೆ ಚಾಲನೆ ನೀಡಿದರು.
ಶಾಸಕ ಹರೀಶ್ ಪೂಂಜ,ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹರಿಕೃಷ್ಣ ಬಂಟ್ವಾಳ, ಪ.ಪಂ ಅಧ್ಯಕ್ಷೆ ರಜನಿ ಕುಡ್ವ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಯುವಮೋರ್ಚಾ ಅಧ್ಯಕ್ಷ ಯಶವಂತ್ ಗೌಡ,
ಕೊರಗಪ್ಪ ನಾಯ್ಕ, ಬಿಜೆಪಿ ಮಂಡಲ ಉಪಾಧ್ಯಕ್ಷ ಸೀತಾರಾಮ ಬೆಳಾಲು, ಯುವ ಮೋರ್ಚಾದ ಕಾರ್ಯದರ್ಶಿ ಉಮೇಶ್, ಪ.ಪಂ ಉಪಾಧ್ಯಕ್ಷ ಜಯಾನಂದ ಗೌಡ, ರೈತ ಮೋರ್ಚಾದ ಅಧ್ಯಕ್ಷ ಜಯಂತ ಗೌಡ, ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಶ್ರೀನಿವಾಸ್ ರಾವ್
ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಸುದರ್ಶನ್ ಬಜ, ಬಿಜೆಪಿ ಯುವ ಮೋರ್ಚಾದ ಕಾರ್ಯದರ್ಶಿ ಉಮೇಶ್ ಕುಲಾಲ್ ,ವಿನುತ್ ಕೋಟ್ಯಾನ್, ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಅಧ್ಯಕ್ಷ ಜೋಯೆಲ್ ಮೆಂಡೋನ್ಸ, ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಪ್ರಭಾಕರ ಸವಣಾಲು ಮೊದಲಾದವರು ಉಪಸ್ಥಿತರಿದ್ದರು.

ನಿಮ್ಮದೊಂದು ಉತ್ತರ