ಜಿಲ್ಲಾ ವಾರ್ತೆತಾಲೂಕು ಸುದ್ದಿರಾಜ್ಯ ವಾರ್ತೆ

ಧರ್ಮಸ್ಥಳದಲ್ಲಿ ಮಿನಿ ಏರ್ಪೋಟ್ 160 ಎಕ್ರೆ ಜಾಗ‌ ನಿಗದಿ: ಸಚಿವ ಸೋಮಣ್ಣ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಿನಿ ಏರ್‌ಪೋರ್ಟ್ ನಿರ್ಮಾಣಕ್ಕೆ ಧರ್ಮಸ್ಥಳದಿಂದ 11 ಕಿ.ಮೀ. ದೂರದಲ್ಲಿ160 ಎಕರೆ ಜಾಗ ಗುರುತಿಸಲಾಗಿದೆ ಎಂದು ವಸತಿ ಸಚಿವರಾದ ಸೋಮಣ್ಣ ಮಾಹಿತಿ ನೀಡಿದ್ದಾರೆ. ವಿಧಾನಸೌಧ ಕಚೇರಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು,160 ಎಕರೆ ಜಾಗ ಗುರುತಿಸಲಾಗಿದ್ದು, ಭೂಮಿ

ಹಸ್ತಾಂತರವಾಗುತ್ತಿದ್ದಂತೆ ಕಾಮಗಾರಿ ಆರಂಭಿಸಲಾಗುವ ಯೋಜನೆ ರೂಪಿಸಲಾಗಿದ್ದು, ಕೇಂದ್ರ ಸರಕಾರವೂ ಈ ಯೋಜನೆಗೆ ಸಾಥ್ ನೀಡಲಿದೆ ಎಂದಿದ್ದಾರೆ. ರಾಜ್ಯದಲ್ಲಿ ವಿಮಾನ ನಿಲ್ದಾಣ, ಏರ್‌ಸ್ಟ್ರಿಪ್‌ಗಳ ನಿರ್ಮಾಣ ಯೋಜನೆಗಳು ಶೀಘ್ರ ಗತಿಯಲ್ಲಿ ನಡೆಯಲಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಿನಿ ಏರ್‌ಪೋರ್ಟ್‌ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿರುವ ಕುರಿತು‌ ಮಾಹಿತಿ ನೀಡಿದರು.

ನಿಮ್ಮದೊಂದು ಉತ್ತರ